ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಬಳದ ಖಾತೆಗಳನ್ನು ‘HRMS’ ನಲ್ಲಿ ಕಡ್ಡಾಯವಾಗಿ ನಮೂದಿಸುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದನ್ವಯ, ದಿನಾಂಕ:30.01.2025ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಕರಣ ಸಂಖ್ಯೆ: ಸಿ.80/2025ರಲ್ಲಿ ತಿರ್ಮಾನಿಸಿದಂತೆ, ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ವಿವಿಧ ಬ್ಯಾಂಕುಗಳು ಒದಗಿಸುವ ಸಂಬಳ ಪ್ಯಾಕೇಜ್ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ/ನೌಕರರಿಗೆ (ಸರ್ಕಾರಿ / ಸರ್ಕಾರಿ ಸಂಸ್ಥೆಗಳು, ಇತ್ಯಾದಿ) ಕಡ್ಡಾಯಗೊಳಿಸುವ ಬಗ್ಗೆ ಆದೇಶಿಸಲಾಗಿದೆ.
ಉಲ್ಲೇಖಿತ ಪತ್ರದಲ್ಲಿನ ಅಂಶಗಳ ಹಿನ್ನೆಲೆ ಹಾಗೂ ಸಚಿವ ಸಂಪುಟದ ಸಭೆಯಲ್ಲಿ ತಿರ್ಮಾನಿಸಿದಂತೆ, ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಈ ಕೆಳಗಿನಂತೆ ಆದೇಶಿಸಲಾಗಿದೆ.
a) ವಿವಿಧ ಬ್ಯಾಂಕುಗಳು ಒದಗಿಸುವ “ಸಂಬಳ ಪ್ಯಾಕೇಜ್ಗಳ’ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಅಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ/ನೌಕರರಿಗೆ (ಸರ್ಕಾರಿ / ಸರ್ಕಾರಿ ಸಂಸ್ಥೆಗಳು, ಇತ್ಯಾದಿ) ಕಡ್ಡಾಯಗೊಳಿಸಿದೆ.
b) ಬ್ಯಾಂಕ್ಗಳು/ಅಂಚೆ ಕಚೇರಿಗಳು ನೀಡುವ PMJJBY ಮತ್ತು PMSBY ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿ/ನೌಕರರಿಗೆ ಆದೇಶಿಸುವುದು.
c) ಬ್ಯಾಂಕ್ಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಪಡೆಯಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿ/ನೌಕರರಿಗೆ ತಿಳಿಸುವುದು.
ಸರ್ಕಾರದ ಅಧಿಕಾರಿ/ನೌಕರರ PMJJBY ಮತ್ತು PMSBY ಯೋಜನೆಗಳ ವಿವರಗಳನ್ನು HRMSನಲ್ಲಿ ನಮೂದಿಸಲು ಈ ಕೆಳಗಿನ ಕ್ರಮವನ್ನು ಅನುಸರಿಸುವುದು.



