BIG NEWS : ವಿಧಾನಸೌಧದಲ್ಲಿ ‘ಶಾಶ್ವತ ವಿದ್ಯುತ್ ದೀಪಾಲಂಕಾರ’ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ.!

ಬೆಂಗಳೂರು : ವಿಧಾನಸೌಧದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಲಾಗಿರುವ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ವಿಧಾನಸೌಧದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಲಾಗಿರುವ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ ಅರ್ಪಿಸಿ, ಶುಭ ಹಾರೈಸಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಅಳವಡಿಕೆ ಮಾಡಲಾದ ಬಣ್ಣಬಣ್ಣದ ವಿದ್ಯುತ್ ದೀಪಗಳು ಐತಿಹಾಸಿಕ ವಿಧಾನಸೌಧದ ಮೆರುಗನ್ನು ಹೆಚ್ಚಿಸುವ ಜೊತೆಗೆ ನೋಡಗರ ಕಣ್ಮನ ಸೆಳೆಯಲಿದೆ. ವಿಧಾನಸೌಧವೀಗ ನಿಸ್ಸಂಶಯವಾಗಿ ಮತ್ತಷ್ಟು ಸುಂದರ, ಮನಮೋಹಕವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಹಣ್ಣು ತರಕಾರಿ ನೀಡಿದ ಮಕ್ಕಳು
ಬೆಳ್ತಂಗಡಿ ತಾಲ್ಲೂಕಿನ ಕೂತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ಬೆಳೆಸಿದ ಹಣ್ಣು ತರಕಾರಿಗಳನ್ನು ಸಿಎಂ ಸಿದ್ದರಾಮಯ್ಯಗೆ ನೀಡಿದರು.

ಮಕ್ಕಳು ಕಲಿಕೆಯ ಜೊತೆ ಕೃಷಿಯ ಬಗ್ಗೆ ಸ್ವಲ್ಪಮಟ್ಟಿಗೆ ಜ್ಞಾನ, ಆಸಕ್ತಿ ಬೆಳೆಸಿಕೊಂಡಿರುವುದು ಭಾರತದಂಥ ಕೃಷಿ ಪ್ರಧಾನ ರಾಷ್ಟ್ರದಲ್ಲಿ ಉತ್ತಮ ಅಭ್ಯಾಸ. ನಾನೂ ಬಾಲ್ಯದಲ್ಲಿ ಕೃಷಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರಿಂದಲೇ ರಾಜ್ಯದ ರೈತರ ಕಷ್ಟ ಸುಖಗಳನ್ನು ಅರಿಯಲು ಸಾಧ್ಯವಾಗಿದೆ. ಈ ಮಕ್ಕಳ ಶ್ರಮ ಶ್ಲಾಘನೀಯ, ಮಕ್ಕಳ ಕೃಷಿಕಾರ್ಯಕ್ಕೆ ಬೆಂಬಲವಾಗಿ ನಿಂತ ಶಾಲೆಗೆ ಎರಡು ಕಂಪ್ಯೂಟರ್ಗಳನ್ನು ಉಡುಗೊರೆಯಾಗಿ ನೀಡಿದೆ. ಶಾಲೆಯ ಶಿಕ್ಷಕ ವೃಂದ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಯುವ ನಾಯಕ ರಕ್ಷಿತ್ ಶಿವರಾಮ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read