ಮಂಡ್ಯ: ಪ್ರವಾಸಿ ತಾಣ ಕೆಆರ್‌ಎಸ್ ಬೃಂದಾವನದಲ್ಲಿ ಶನಿವಾರ ಪ್ರವಾಸಕ್ಕೆ ಬಂದಿದ್ದ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರಿದ ಕೇರಳ ಪ್ರವಾಸಿಗನಿಗೆ ಸಾರ್ವಜನಿಕರು ಹಾಗೂ ಪ್ರವಾಸಿಗರು ಥಳಿಸಿದ ಪರಿಣಾಮ ಮೃತಪಟ್ಟ ಘಟನೆ ನಡೆದಿದೆ.
ಕೇರಳ ಮೂಲದ ಪ್ರವಾಸಿಗ ಜಾರ್ಜ್ ಜೋಸೆಫ್(45) ಮೃತಪಟ್ಟ ವ್ಯಕ್ತಿ. ಶನಿವಾರ ಕೇರಳದಿಂದ ಸ್ನೇಹಿತರೊಂದಿಗೆ ಬೃಂದಾವನ ವೀಕ್ಷಣೆಗೆ ಆಗಮಿಸಿದ್ದ ಜಾರ್ಜ್ ಸಂಗೀತ ಕಾರಂಜಿ ವೀಕ್ಷಿಸುವಾಗ ಮಹಿಳೆ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾನೆ.
ಈ ವೇಳೆ ಪ್ರವಾಸಿಗರು ಮತ್ತು ಸಾರ್ವಜನಿಕರು ಆತನನ್ನು ಥಳಿಸಿದ್ದಾರೆ. ಹಲ್ಲೆಗೊಳಗಾದ ಜಾರ್ಜ್ ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕೆಆರ್‌ಎಸ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.