ವಿಜಯಪುರ : ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ವೈದ್ಯ ಡಾ ರಾಜಶೇಖರ್ ಮುಚ್ಚಂಡಿ ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿರುವ ಶ್ರೀ ಸಾಯಿ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಡಾ.ರಾಜಶೇಖರ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. . ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಾ.ರಾಜಶೇಖರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

