HomeKarnatakaಪೌರಕಾರ್ಮಿಕರ ಕಲ್ಯಾಣಕ್ಕೆ ಬಿಬಿಎಂಪಿಯಿಂದ ರೂ.730 ಹಣ ಮೀಸಲು: ಡಿಸಿಎಂ ಡಿ.ಕೆ.ಶಿವಕುಮಾರ್

ಪೌರಕಾರ್ಮಿಕರ ಕಲ್ಯಾಣಕ್ಕೆ ಬಿಬಿಎಂಪಿಯಿಂದ ರೂ.730 ಹಣ ಮೀಸಲು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಪೌರಕಾರ್ಮಿಕರಿಗಾಗಿ ಬಿಬಿಎಂಪಿಯಿಂದ ಒಟ್ಟು ರೂ.730 ಕೋಟಿ ಹಣ ನಾವು ಮೀಸಲಿಟ್ಟಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ, ಈ ಬಾರಿಯ ಬಿಬಿಎಂಪಿ ಬಜೆಟ್ ಅಲ್ಲಿ ಪೌರಕಾರ್ಮಿಕರ ವೇತನ ಪಾವತಿಗೆ ರೂ.500 ಕೋಟಿ ಹಣ ಘೋಷಣೆ ಮಾಡಲಾಗಿದೆ. ರೂ. 107 ಕೋಟಿ ಹಣವನ್ನು ಪಿಂಚಣಿಗೆ ಮೀಸಲಿಡಲಾಗಿದೆ. ಮೃತಪಟ್ಟವರ ಹೆಸರಿನಲ್ಲಿ ರೂ.10 ಲಕ್ಷ ಹಣ ಮೀಸಲಿಟ್ಟು ರೂ. 6 ಸಾವಿರ ಪಿಂಚಣಿ ನೀಡುವ ಯೋಜನೆ ತರಲಾಗಿದೆ. ಪೌರಕಾರ್ಮಿಕರಿಗಾಗಿ ಬಿಬಿಎಂಪಿಯಿಂದ ಒಟ್ಟು ರೂ.730 ಕೋಟಿ ಹಣ ನಾವು ಮೀಸಲಿಟ್ಟಿದ್ದೇವೆ ಎಂದರು.

ಶೂ, ಕೈಗವಸು ಸೇರಿದಂತೆ ಇತರೇ ಸಲಕರಣೆಗಳ ವಿತರಣೆಗೆ ರೂ.5 ಕೋಟಿ, ಸಮವಸ್ತ್ರಕ್ಕೆ ರೂ. 6 ಕೋಟಿ, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಮರುಪಾವತಿಗೆ ರೂ. 6 ಕೋಟಿ, ಆರೋಗ್ಯಕ್ಕೆ ರೂ.4 ಕೋಟಿ, ಒಂಟಿ ಮನೆಗೆ ಪ್ರತ್ಯೇಕವಾಗಿ ರೂ.30 ಕೋಟಿ, ಕೌಶಲ್ಯ ಅಭಿವೃದ್ದಿಗೆ ರೂ.5 ಕೋಟಿ, ಟ್ಯಾಕ್ಸಿ, ಆಟೋ ಚಾಲಕರಿಗೆ ರೂ. 10 ಕೋಟಿ ಒಟ್ಟು ನಿಮ್ಮ ಕಲ್ಯಾಣಕ್ಕೆ ರೂ. 64 ಕೋಟಿ ಮೀಸಲಿಡಲಾಗಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೌರಕಾರ್ಮಿಕರ ಬದುಕಿನಲ್ಲಿ ಬದಲಾವಣೆ ತರುವುದೇ ಕಾಂಗ್ರೆಸ್ ಸರ್ಕಾರದ ಸಂಕಲ್ಪ. ಪೌರಕಾರ್ಮಿಕರು ನಮ್ಮ ಹಾಗೂ ದೇಶದ ಶಕ್ತಿ, ಕಾಂಗ್ರೆಸ್ ಸರ್ಕಾರ ನಿಮ್ಮ ಶಕ್ತಿ ಎಂಬುದನ್ನು ಮರೆಯಬಾರದು. ನಿಮ್ಮ ಕೆಲಸ ಖಾಯಂ ಆದ ತಕ್ಷಣ ನಿಮಗೆ ಬರುವ ಸಂಬಳ 50 ಸಾವಿರ ಮುಟ್ಟುತ್ತದೆ ಎಂದು ಹೇಳಿದರು.

ಮನೆಯಲ್ಲಿ ನಾವು ವೈಯಕ್ತಿಕವಾಗಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುತ್ತೇವೆ. ಮನೆಯನ್ನು ಸ್ವಚ್ಚಗೊಳಿಸುತ್ತೇವೆ, ಹಾಗಾದರೆ ನಾವೂ ಸಹ ಪೌರ ಕಾರ್ಮಿಕರಲ್ಲವೇ. ನಾವು ಮನೆಯನ್ನು ಸ್ವಚ್ಚಗೊಳಿಸುತ್ತೇವೆ. ನೀವು ಪುರವನ್ನು ಸುಂದರಗೊಳಿಸತ್ತೀರಿ. ನಾವು ಒಳಗಡೆ, ನೀವು ಹೊರಗಡೆ. ಆದ ಕಾರಣ ನಮ್ಮ ನಿಮ್ಮ ನಡುವೆ ಯಾವುದೇ ಬೇಧ ಭಾವವಿಲ್ಲ ಎಂದರು.

ನನಗೆ ಇಂದೇ ನಿಮಗೆ ನೇಮಕಾತಿ ಪತ್ರ ನೀಡಬೇಕು ಎನ್ನುವ ಆಲೋಚನೆ ಇತ್ತು. ಒಂದಷ್ಟು ಸಿಂದುತ್ವ ಬಾಕಿ ಇರುವ ಕಾರಣ ಮೇ 1 ರಂದು ನೇಮಕಾತಿ ಪತ್ರ ನಿಮ್ಮ ಕೈ ಸೇರುವುದು ಎಂದರು.

ಪೌರ ಕಾರ್ಮಿಕರ ಖಾಯಂ ವಿಚಾರದಲ್ಲಿ ಒಂದಷ್ಟು ಅಧಿಕಾರಿಗಳು ಸಿಂಧುತ್ವ ನೀಡುವುದಕ್ಕೆ ಕಿರುಕುಳ ನೀಡುತ್ತಿದ್ದಾರೆ ಎನ್ನುವ ದೂರುಗಳು ಬರುತ್ತಿವೆ. ಯಾರೂ ಸಹ ಒಂದೇ ಒಂದು ರೂಪಾಯಿ ಹಣ ನೀಡಬಾರದು. ಹಣ ಕೇಳಿದರೆ ನನಗೆ ಲಿಖಿತವಾಗಿ ದೂರು ನೀಡಬೇಕು. ಸಿಂಧುತ್ವ ಸಮಸ್ಯೆ ಬಗೆಹರಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular