ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪುಯು ಬೋರ್ಡ್ ಮಾಹಿತಿ ನೀಡಿದೆ.
ನಾಳೆ ಮಧ್ಯಾಹ್ನ 12:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಬಳಿಕ ಮಧ್ಯಾಹ್ನ 1:30ಕ್ಕೆ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ಪಿಯುಸಿ ಪರೀಕ್ಷೆ ನಡೆದಿತ್ತು.