HomeLatest NewsBIG NEWS: ರಾಜ್ಯದ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಮಹತ್ವದ ಕ್ರಮ

BIG NEWS: ರಾಜ್ಯದ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಮಹತ್ವದ ಕ್ರಮ

ಬೆಂಗಳೂರು: ರಾಜ್ಯದ ಎಲ್ಲಾ 215 ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕೆಗಳಿಂದ ಆಗಬಹುದಾದ ಮಾಲಿನ್ಯ ತಗ್ಗಿಸುವ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ(IISC), IIT ರೀತಿಯ ಉನ್ನತ ಮಟ್ಟದ ಸಂಸ್ಥೆಗಳಿಂದ ವಿಸ್ತೃತ ಅಧ್ಯಯನ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಸೂಚಿಸಿದ್ದಾರೆ.

ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ಅವರು, ಉದ್ಯಮಗಳನ್ನು ಬೆಳೆಸುವ ಜೊತೆಯಲ್ಲೇ ಪರಿಸರ ರಕ್ಷಣೆಯ ಅಗತ್ಯವಿದೆ ಎಂಬ ನೆಲ, ಜಲ, ವಾಯು, ಕೃಷಿ ಹಾಗೂ ಮಾನವ ಆರೋಗ್ಯದ ಮೇಲೆ ಕೈಗಾರಿಕೆಗಳಿಂದ ಉಂಟಾಗುವ ಪರಿಣಾಮಗಳನ್ನು ವಿಶ್ಲೇಷಿಸಲು ಅಧ್ಯಯನ ತಂಡಗಳನ್ನು ರಚಿಸಲಾಗುವುದು. ಈ ತಂಡಗಳು ಎಲ್ಲ ಕೈಗಾರಿಕಾ ಪ್ರದೇಶಗಳಿಗೆ ಭೇಟಿನೀಡಿ, ಮಾಲಿನ್ಯದ ತೀವ್ರತೆಯನ್ನು ಗುರುತಿಸಿ, ಸೂಕ್ತ ಪರಿಹಾರ ಕ್ರಮಗಳನ್ನು ಶಿಫಾರಸು ಮಾಡಲಿವೆ. ಈ ಉದ್ದೇಶಕ್ಕಾಗಿ ತಜ್ಞ ಸಂಸ್ಥೆಗಳನ್ನು ಗುರುತಿಸಿ, ನಿಗದಿತ ಅವಧಿಯಲ್ಲಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ,  KIADB CEO ಡಾ. ಮಹೇಶ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ಕೈಗೊಂಡಿರುವ ವಿವಿಧ ಯೋಜನೆಗಳು, ಅನುಷ್ಠಾನಗೊಳಿಸಬೇಕಿರುವ ಕಾರ್ಯಕ್ರಮಗಳ ಕುರಿತಂತೆ ಸಚಿವರು ಚರ್ಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular