ಅಪ್ರಾಪ್ತ ಬಾಲಕಿಯರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸುವ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ವರದಿಗಳ ಪ್ರಕಾರ, ಉತ್ತರಾಖಂಡದ ಬಾಗೇಶ್ವರ್ ಜಿಲ್ಲೆಯ ಕಪ್ಕೋಟ್ ಬ್ಲಾಕ್ನಲ್ಲಿ ಈ ಘಟನೆ ನಡೆದಿದೆ.ವೈರಲ್ ಆಗಿರುವ ವೀಡಿಯೊದಲ್ಲಿ, ವ್ಯಕ್ತಿಯೊಬ್ಬ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಥಳಿಸುವುದನ್ನು ಮತ್ತು ಅವರನ್ನು ಅವಾಚ್ಯವಾಗಿ ನಿಂದಿಸುವುದನ್ನು ಕಾಣಬಹುದು. ಹುಡುಗಿಯರು ಭಯಭೀತರಾಗಿ ಅಳುವುದನ್ನು ಕಾಣಬಹುದು.
ಈ ವಿಡಿಯೋಗೆ ಬಾಗೇಶ್ವರ ಪೊಲೀಸರು ಪ್ರತಿಕ್ರಿಯಿಸಿದ್ದು, “ಈ ವಿಷಯಕ್ಕೆ ಸಂಬಂಧಿಸಿದಂತೆ ಕಪ್ಕೋಟ್ ಪೊಲೀಸ್ ಠಾಣೆಯಲ್ಲಿ ತಕ್ಷಣ ಪ್ರಕರಣ ದಾಖಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.
ಮೂವರು ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕಪ್ಕೋಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಬಿಎನ್ಎಸ್ನ ಸೆಕ್ಷನ್ 74/115 (2) / 352/351 (2) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 7/8 ರ ಅಡಿಯಲ್ಲಿ ಆರೋಪಗಳನ್ನು ದಾಖಲಿಸಿದ್ದಾರೆ.
उक्त प्रकरण में थाना कपकोट में तत्काल अभियोग पंजीकृत करते हुए एक अभियुक्त को गिरफ्तार किया गया है। शेष अभियुक्तों की गिरफ़्तारी हेतु प्रयास जारी हैंl
— Bageshwar Police Uttarakhand (@PoliceBageshwar) April 7, 2025