ಬಿಸಿಲ ಝಳದಿಂದ ಪೌರಕಾರ್ಮಿಕರನ್ನು ರಕ್ಷಿಸಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ವೇಳೆ ಬೀಸಲಿರುವ ಬಿಸಿ ಗಾಳಿ ಮತ್ತು ಸೂರ್ಯನ ತಾಪಮಾನದಿಂದ ಉಂಟಾಗುವ ಪರಿಣಾಮಗಳಿಂದ ಪೌರಕಾರ್ಮಿಕರು ಅಥವಾ ನೈರ್ಮಲ್ಯ ಕಾರ್ಮಿಕರನ್ನು ರಕ್ಷಿಸುವ ಕುರಿತು ಹೊರಡಿಸಿರುವ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಅಖಿಲ ಭಾರತ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ ಸಲ್ಲಿಸಿದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದು, ಪೌರಾಡಳಿತ ನಿರ್ದೇಶಕರು ಏಪ್ರಿಲ್ 2 ರಂದು ಹೊರಡಿಸಿದ ಸುತ್ತೋಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಸರ್ಕಾರಿ ವಕೀಲರು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅದನ್ನು ದಾಖಲಿಸಿಕೊಂಡ ನ್ಯಾಯಪೀಠ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಆದೇಶಿಸಿದೆ. ಒಂದು ವೇಳೆ ಸುತ್ತಲೂ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿರುವುದು ಕಂಡು ಬಂದರೆ ಅರ್ಜಿದಾರರು ಪುನಃ ನ್ಯಾಯಾಲಯಕ್ಕೆ ಬರಬಾರದು ಎಂದು ತಿಳಿಸಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿರುವದರಿಂದ ಕೇಂದ್ರ ಸರ್ಕಾರ ಹೊರಡಿಸಿದ್ದ ಬಿಸಿ ಅಲೆಗಳ ನಿರ್ವಹಣಾ ಮಾರ್ಗಸೂಚಿಯಂತೆ ಅಗತ್ಯ ಕ್ರಮ ವಹಿಸಬೇಕು. ಜಿಲ್ಲಾ, ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಸಂಬಂಧಿಸಿದ ಇಲಾಖೆಗಳನ್ನು ಪರಿಣಾಮಕಾರಿಗೊಳಿಸುವ ತುರ್ತು ಅವಶ್ಯಕತೆ ಇದೆ.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯಾವುದೇ ಅನಾಹುತ ಸಂಭವಿಸಿದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕಟ್ಟಡ ಕಾರ್ಮಿಕರು, ಪೌರಕಾರ್ಮಿಕರು, ಅಂಗನವಾಡಿ, ಅಸಂಘಟಿತ ಕಾರ್ಮಿಕರ ಒತ್ತಡ ಕಡಿಮೆ ಮಾಡಲು ಸಮಯ ಬದಲಾವಣೆ, ಸಾರ್ವಜನಿಕರ ಕಚೇರಿಗೆ ಭೇಟಿ ಸಮಯ ಬದಲಾವಣೆ ಮಾಡಬೇಕು.

ಪೌರಕಾರ್ಮಿಕರ ಕಾರ್ಯನಿರ್ವಹಣೆಗೆ ಅನುಕೂಲವಾಗುವಂತೆ ಸ್ಥಳೀಯ ಬಿಸಿಲಿನ ಪರಿಸ್ಥಿತಿಗೆ ಅನುಗುಣವಾಗಿ ಸಮಯ ನಿಗದಿಪಡಿಸಬೇಕು. ಕುಡಿಯುವ ನೀರು, ಉಪಾಹಾರ ಒದಗಿಸಬೇಕು. ಅಸಂಘಟಿತ, ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಮತ್ತು ಆಟದ ಮೈದಾನ, ಪಾರ್ಕ್ ಗಳಲ್ಲಿ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read