ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ರಾಜ್ಯ ಸರ್ಕಾರ ಸಾಗರೋತ್ತರ ಉದ್ಯೋಗ ಮೇಳ ಆಯೋಜಿಸಲಿದೆ.
ಜರ್ಮನಿ, ಜಪಾನ್, ಇಟಲಿಯಲ್ಲಿ ನರ್ಸ್, ಅರೆ ವೈದ್ಯಕೀಯ ವೃತ್ತಿಪರರಿಗೆ ಬೇಡಿಕೆಯಿದೆ. ಮುಂದಿನ ಮೂರು ತಿಂಗಳಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಸಾಗರೋತ್ತರ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

