ದೆಹಲಿ ಮೆಟ್ರೋದಲ್ಲಿ ಆಘಾತಕಾರಿ ದೃಶ್ಯ: ಆತ್ಮಹತ್ಯೆಗೆ ಯತ್ನಿಸಿದ ಯುವಕ | Shocking Video

ದೆಹಲಿಯ ಮಯೂರ್ ವಿಹಾರ್ ಫೇಸ್-1 ಮೆಟ್ರೋ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವುದು ಆತಂಕ ಮೂಡಿಸಿದೆ. ಸುಮಾರು ಒಂದು ಗಂಟೆಗಳ ಕಾಲ ನಿಲ್ದಾಣದ ತಡೆಗೋಡೆಗೆ ನೇತಾಡಿಕೊಂಡಿದ್ದ ಆತ ನಂತರ ಕೆಳಗೆ ಜಿಗಿದಿದ್ದಾನೆ. ಈ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ವೈರಲ್ ಆಗಿದೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಕೆಳಗಿಳಿಯುವಂತೆ ಪೊಲೀಸರು ಗಂಟೆಗಟ್ಟಲೆ ಮನವೊಲಿಸಲು ಪ್ರಯತ್ನಿಸಿದರು. ಆದರೆ ಆತ ಅವರ ಮಾತಿಗೆ ಕಿವಿಗೊಡದೆ ಕೆಳಗೆ ಹಾರಿದ್ದಾನೆ. ಗಾಯಗೊಂಡ ಆತನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.

ಆತ ಈ ಕೃತ್ಯಕ್ಕೆ ಮುಂದಾಗಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ, ಪುರುಷರ ಹಕ್ಕುಗಳಿಗಾಗಿ ಹೋರಾಡುವ ಎನ್‌ಸಿಎಂ ಇಂಡಿಯಾ ಕೌನ್ಸಿಲ್ ಫಾರ್ ಮೆನ್ ಅಫೇರ್ಸ್ ಎಂಬ ಸಂಸ್ಥೆಯು ಆತನ ವೈವಾಹಿಕ ಕಲಹವೇ ಇದಕ್ಕೆ ಕಾರಣ ಎಂದು ಹೇಳಿದೆ.

ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ವಿಚಾರಣೆ ಪೂರ್ಣಗೊಂಡ ನಂತರ ಕ್ರಮ ಕೈಗೊಳ್ಳಲಿದ್ದಾರೆ. ಮೆಟ್ರೋ ನಿಲ್ದಾಣದಲ್ಲಿ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read