ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ ಸಂಭವಿಸಿದ್ದು, ಕೃಷಿಹೊಂಡದಲ್ಲಿ ಮುಳುಗಿ ಅಕ್ಕ-ತಂಗಿ ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಕುರಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ.ಮೃತರನ್ನು ರಾಧಾ (17) ಸಾಹಿತಿ (14) ಎಂದು ಗುರುತಿಸಲಾಗಿದೆ. ಶಾಲೆಗೆ ರಜೆಯಿದ್ದ ಕಾರಣ ತಾಯಿ ಜೊತೆ ತೋಟಕ್ಕೆ ಹೋಗಿದ್ದರು. ಕೃಷಿ ಹೊಂಡಕ್ಕೆ ಅಳವಡಿಸಿದ್ದ ಪೈಪ್ ಸರಿ ಮಾಡಲು ಹೋಗಿ ಇಬ್ಬರು ಕಾಲುಜಾರಿ ನೀರಿಗೆ ಬಿದ್ದಿದ್ದಾರೆ.
ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ . ಘಟನೆ ನಡೆದ ಸ್ಥಳಕ್ಕೆ ಚೇಳೂರು ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.