ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ ಇಂದಿನಿಂದ ಜಾರಿಗೆ ಬಂದಿದೆ. ಸರ್ಕಾರ ಅಧಿಸೂಚನೆ ಹೊರಡಿಸಿದೆ. ವಕ್ಫ್ ತಿದ್ದುಪಡಿ ಕಾಯ್ದೆ: ಭಾರತದ ಗೆಜೆಟ್‌ನಲ್ಲಿ ಅಧಿಸೂಚನೆಯ ನಂತರ, ವಕ್ಫ್(ತಿದ್ದುಪಡಿ) ಕಾಯ್ದೆ, 2025, ಇಂದು (ಏಪ್ರಿಲ್ 8) ರಿಂದ ಅಧಿಕೃತವಾಗಿ ಜಾರಿಗೆ ಬಂದಿತು.
ವಕ್ಫ್ ಮಸೂದೆಗೆ ರಾಷ್ಟ್ರಪತಿಗಳ ಒಪ್ಪಿಗೆ
ಶನಿವಾರ(ಮಾರ್ಚ್ 5), ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ವಾರದ ಆರಂಭದಲ್ಲಿ ಸಂಸತ್ತು ಅಂಗೀಕರಿಸಿದ ವಕ್ಫ್(ತಿದ್ದುಪಡಿ) ಮಸೂದೆ, 2025 ಗೆ ತಮ್ಮ ಒಪ್ಪಿಗೆಯನ್ನು ನೀಡಿದರು.
“ಸಂಸತ್ತಿನ ಈ ಕೆಳಗಿನ ಕಾಯ್ದೆಯು ಏಪ್ರಿಲ್ 5, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದುಕೊಂಡಿದೆ ಮತ್ತು ಇದನ್ನು ಸಾಮಾನ್ಯ ಮಾಹಿತಿಗಾಗಿ ಇಲ್ಲಿ ಪ್ರಕಟಿಸಲಾಗಿದೆ: ವಕ್ಫ್ (ತಿದ್ದುಪಡಿ) ಕಾಯ್ದೆ, 2025,” ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.
The Central Government appoints the 8th day of April 2025 as the date on which the provisions of the Waqf Act shall come into force pic.twitter.com/eNKcQt3zLq
— ANI (@ANI) April 8, 2025