ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರ ನಿಯೋಜನೆ ರದ್ದು: ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಆದೇಶ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಿಯೋಜನೆಯನ್ನು ರದ್ದುಪಡಿಸಲಾಗಿದೆ. ಈ ಕುರಿತಾಗಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯಲ್ಲಿ ಸರ್ಕಾರದ ಆದೇಶಾನುಸಾರ 2024-25ನೇ ಸಾಲಿನ ಶೈಕ್ಷಣಿಕ ಅವಧಿಯವರೆಗೆ ಕೆಲವು ಶಿಕ್ಷಕರುಗಳನ್ನು ಸರ್ಕಾರವು ತಾತ್ಕಾಲಿಕವಾಗಿ ನಿಯೋಜಿಸಿದೆ. ಆದರೆ ಕೆಲವು ಜಿಲ್ಲೆಗಳ ಉಪನಿರ್ದೇಶಕರುಗಳು ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು ನಿಯೋಜನೆ ಮೇಲಿರುವ ಶಿಕ್ಷಕರುಗಳನ್ನು ಮಾರ್ಚ್ ಅಂತ್ಯಕ್ಕೆ ಕರ್ತವ್ಯದಿಂದ ಬಿಡುಗಡೆಗೊಳಿಸದಿರುವುದು ಗಮನಕ್ಕೆ ಬಂದಿರುತ್ತದೆ.

ಪ್ರಸ್ತುತ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ನಿಯೋಜನೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಿಯೋಜನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಅಂತಹ ಶಿಕ್ಷಕರುಗಳನ್ನು ಕೂಡಲೆ ಶಾಲಾ ಕರ್ತವ್ಯದಿಂದ ಬಿಡುಗಡೆಗೊಳಿಸತಕ್ಕದ್ದು ಹಾಗೂ ಬಿಡುಗಡೆಗೊಂಡ ಶಿಕ್ಷಕರು ದಿನಾಂಕ: 09/04/2025 ರೊಳಗೆ ಮೂಲ ಶಾಲೆಯಲ್ಲಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು,

ಒಂದು ವೇಳೆ ನಿಗದಿತ ದಿನಾಂಕದೊಳಗೆ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಅಂತಹ ಶಿಕ್ಷಕರನ್ನು ಅನಧಿಕೃತ ಗೈರು ಹಾಜರಿ ಪ್ರಕರಣ ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲು ತಿಳಿಸಿದ ಹಾಗೂ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದ ಶಿಕ್ಷಕರ ವೇತನವನ್ನು ಪಾವತಿಸದೇ ತಡೆಹಿಡಿಯಲು ಸೂಚಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ವೇತನ ಬಟಾವಾಡೆ ಅಧಿಕಾರಿಗಳನ್ನೇ ನೇರಹೊಣೆಗಾರನ್ನಾಗಿ ಮಾಡಲಾಗುವುದು.

ಶಿಕ್ಷಕರನ್ನು ಬಿಡುಗಡೆಗೊಳಿಸಲಾಗಿರುವ ಹಾಗೂ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿರುವ ಶಿಕ್ಷಕರ ಜಿಲ್ಲಾವಾರು ಪಟ್ಟಿಯನ್ನು ನಮೂನೆಯಲ್ಲಿರುವಂತೆ ದಿನಾಂಕ: 17/04/20250 wen ಈ ಕಛೇರಿಗೆ ಕಳುಹಿಸಲು ತಿಳಿಸಿದೆ ತಪ್ಪಿದಲ್ಲಿ ಅಂತಹ ಉಪನಿರ್ದೇಶಕರು(ಆಡಳಿತ) ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಸಂಬಂಧಿಸಿದ ಸಿಬ್ಬಂಧಿಗಳ ವಿರುದ್ಧ ಕರ್ತವ್ಯ ನಿರ್ಲಕ್ಷತೆ ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read