ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಆನ್ ಲೈನ್ ನಲ್ಲಿ ಅರ್ಜಿ

 ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 19 ಅಂಗನವಾಡಿ ಕಾರ್ಯಕರ್ತೆ, 68 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

  ಅರ್ಹ ಅಭ್ಯರ್ಥಿಗಳು ಇಲಾಖೆಯ https://dwcd.karnataka.gov.in ರಲ್ಲಿ ಆನ್‍ಲೈನ್ ಸೇವೆಗಳ ಟ್ಯಾಬ್‍ನಲ್ಲಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಯ ಸಬ್‍ಟ್ಯಾಬ್‍ನಲ್ಲಿ ಕ್ಲಿಕ್ ಮಾಡುವ ಮೂಲಕ ಆನ್‍ಲೈನ್ ವೆಬ್‍ಸೈಟ್ ವಿಳಾಸ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಲು ಮೇ 9 ಕೊನೆಯ ದಿನವಾಗಿರುತ್ತದೆ.

ಚನ್ನಗಿರಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 19 ಅಂಗನವಾಡಿ ಕಾರ್ಯಕರ್ತೆ ಮತ್ತು 68 ಅಂಗನವಾಡಿ ಸಹಾಯಕಿಯರನ್ನು ನೇಮಕಾತಿ ಮಾಡಲು ಈ ಹಿಂದೆ ಭೌತಿಕವಾಗಿ ಅರ್ಜಿ ಆಹ್ವಾನಿಸಲಾಗಿದ್ದು ಇದನ್ನು ಪರಿಗಣಿಸಲಾಗುವುದಿಲ್ಲ, ಈ ಅಭ್ಯರ್ಥಿಗಳು ಸಹ ಹೊಸದಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಆನ್‍ಲೈನ್ ತಂತ್ರಾಂಶದಲ್ಲಿ ನಿಗದಿತ ಅರ್ಜಿ ತುಂಬುವುದು,  ಭಾವಚಿತ್ರ, ಅಗತ್ಯ ದಾಖಲೆ, ಆಧಾರ್ ಸಂಖ್ಯೆ ನಮೂದಿಸಿ ಇ-ಹಸ್ತಾಕ್ಷರದೊಂದಿಗೆ ಅರ್ಜಿ ಪೂರ್ಣಗೊಳಿಸಬೇಕಾಗಿರುತ್ತದೆ. ನಾಲ್ಕು ವಿವಿಧ ಹಂತದಲ್ಲಿ ಅರ್ಜಿಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದು. ವೆಬ್‍ಸೈಟ್‍ನಲ್ಲಿ ತಿಳಿಸಿರುವ ಅಂಶಗಳ ಜೊತೆಗೆ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಇತರೆ ಅವಶ್ಯಕ ದಾಖಲಾತಿಗಳ ಜೊತೆಗೆ, ವಿಧವೆಯರು ಪತಿಯ ಮರಣ ಪ್ರಮಾಣ ಪತ್ರ ಅಥವಾ ವಿಧವಾ ಪ್ರಮಾಣ ಪತ್ರವನ್ನು ಆನ್‍ಲೈನ್‍ನಲ್ಲಿ ಅಪ್ ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ. ಮುಂದುವರೆದು ಅಭ್ಯರ್ಥಿಗಳ ಆಯ್ಕೆ ಪಟ್ಟಿ ತಯಾರಿಸುವಾಗ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿರುವ ವಿಧವೆಗೆ ಸಂಬಂಧಿಸಿದ ದಾಖಲಾತಿಗಳನ್ನು ಡೌನ್‍ಲೋಡ್ ಮಾಡಿಕೊಂಡು ಭೌತಿಕವಾಗಿ ಪರಿಶೀಲಿಸಿ ಆಯ್ಕೆ ಪಟ್ಟಿ ತಯಾರಿಸಲಾಗುವುದು. ಆಸಿಡ್ ದಾಳಿಗೆ ತುತ್ತಾದ ಮಹಿಳೆಯರಿಗೆ ಮೊದಲ ಆದ್ಯತೆ, ಇಲಾಖೆಯ ಸಂಸ್ಥೆಗಳ ನಿವಾಸಿಗಳಿಗೆ ಎರಡನೇ ಆದ್ಯತೆ, ವಿಧವೆಯರಿಗೆ ಮೂರನೇ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಹರಿಹರ ದೂ.ಸಂ:08192-295444 ನ್ನು ಸಂಪರ್ಕಿಸಲು ಚನ್ನಗಿರಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read