HomeLatest Newsಸ್ವಚ್ಛತಾ ನೌಕರರನ್ನು ಜಾಡಮಾಲಿ ಎಂದು ಕರೆಯುವಂತಿಲ್ಲ: ಹೈಕೋರ್ಟ್ ಆದೇಶ

ಸ್ವಚ್ಛತಾ ನೌಕರರನ್ನು ಜಾಡಮಾಲಿ ಎಂದು ಕರೆಯುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸ್ವಚ್ಛತಾ ನೌಕರರನ್ನು ಜಾಡಮಾಲಿ ಎಂದು ಕರೆಯುವಂತಿಲ್ಲ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನಗರ ಮತ್ತು ಪಟ್ಟಣಗಳನ್ನು ಸ್ವಚ್ಛವಾಡಿರುವ ಸೇವೆ ಸಲ್ಲಿಸುವ ಸ್ವಚ್ಛತಾ ನೌಕರರ ಬಗ್ಗೆ ಜಾಡಮಾಲಿ ಪದ ಬಳಕೆ ಮಾಡಬಾರದು ಎಂದು ನಿರ್ದೇಶಿಸಿದೆ. ರಾಜ್ಯದ ವಿವಿಧೆಡೆ ತಾವು ಗುತ್ತಿಗೆ ಆಧಾರದಲ್ಲಿ ಸ್ವಚ್ಛತಾ ನೌಕರರಾಗಿ ಸೇವೆ ಸಲ್ಲಿಸಿದ್ದು, ಸೇವೆ ಕಾಯಂಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ರಮೇಶ್ ಬಾಬು ಸೇರಿದಂತೆ ಇತರೆ ಸ್ವಚ್ಛತಾ ನೌಕರರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರರನ್ನು ಜಾಡಮಾಲಿಗಳು ಎಂದು ಹೆಸರಿಸಲಾಗಿರುವುದನ್ನು ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ವಿಭಾಗಿಯ ಪೀಠ ನೋಡಿ ಬೇಸರ ವ್ಯಕ್ತಪಡಿಸಿದೆ. ಒಂದು ವರ್ಗದ ನೌಕರರನ್ನು ಉದ್ದೇಶಿಸಿ ಬಳಸುವ ಪದ ಗೌರವದಿಂದ ಕೂಡಿರಬೇಕು. ಹೀಗಾಗಿ ಸರ್ಕಾರ ಇನ್ನು ಮುಂದೆ ಜಾಡಮಾಲಿ ಪದದ ಬದಲು ಸ್ವಚ್ಛತಾ ನೌಕರರು ಎಂದು ಬಳಸುವುದು ಸೂಕ್ತ ಎಂದು ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular