ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಬಸ್ ಪ್ರಯಾಣದರ ಹೆಚ್ಚಳ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್

ವಿಜಯಪುರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದಂತೆ ಬಸ್ ಪ್ರಯಾಣ ದರ ಕೂಡ ಏರಿಕೆಯಾಗಲಿದೆ ಎನ್ನುವ ಆತಂಕದಲ್ಲಿದ್ದ ಜನತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿ ಸುದ್ದಿ ನೀಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ಪ್ರಯಾಣದರ ಏರಿಕೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಡೀಸೆಲ್ ದರ ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ ಬಸ್ ಪ್ರಯಾಣದರ ಏರಿಕೆಯಾಗಬಹುದೆಂಬ ಆತಂಕ ಜನರಲ್ಲಿ ಮನೆ ಮಾಡಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವರು, ಬಸ್ ಪ್ರಯಾಣದ ಏರಿಕೆ ಮಾಡುವುದಿಲ್ಲವೆಂದು ಹೇಳಿದ್ದಾರೆ. ಎರಡು ವರ್ಷದಲ್ಲಿ 1031 ಬಸ್ ಖರೀದಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆ 2,000 ಬಸ್ ಗಳ ಖರೀದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read