ಬೆಂಗಳೂರು : 27.03.2025ರ ಕರ್ನಾಟಕ ಸರ್ಕಾರದ ಅಧಿಸೂಚನೆಯನ್ವಯ ಪ್ರಾಥಮಿಕ ಶಾಲಾ ಶಿಕ್ಷಕರಿಗೆ/ಜಿಪಿಟಿ ಶಿಕ್ಷಕರಿಗೆ ಪ್ರೌಢಶಾಲಾ ಗ್ರೇಡ-2 ಶಿಕ್ಷಕರಾಗಿ ಬಡ್ತಿ ನೀಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಕಲ್ಯಾಣ ಕರ್ನಾಟಕ ವಿಭಾಗದ ಎಲ್ಲಾ ಜಿಲ್ಲೆಯ ಜಿಪಿಟಿ ಮತ್ತು ಪಿಎಸ್ಟಿ ಶಿಕ್ಷಕರ ಸಂಘದ ಪ್ರತಿನಿಧಿಗಳನ್ನೊಳಗೊಂಡ ಸಭೆ ನಡಾವಳಿ ದಿನಾಂಕ 18.03.2025 ಹಾಗೂ 07.04.2025 .ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ1ರ ಸರ್ಕಾರದ ಅಧಿಸೂಚನೆಯನ್ನ ಶಿಕ್ಷಣ ಇಲಾಖೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ/ ಜಿಪಿಟಿ ಶಿಕ್ಷಕರಿಗೆ ಪ್ರೌಢಶಾಲಾ ಗ್ರೇಡ-2 ಶಿಕ್ಷಕರಾಗಿ ಮುಂಬಡ್ತಿ ನೀಡುವ ಬಗ್ಗೆ ಸ್ಪಷ್ಟಿಕರಣ ನೀಡಿ ಈ ಕೆಳಗಿನಂತೆ ನಿರ್ದೇಶನ ನೀಡಲಾಗಿದೆ.


