HomeLatest NewsBIG NEWS : ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್ : ಶಾಲಾ...

BIG NEWS : ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್ : ಶಾಲಾ ಶುಲ್ಕ ಶೇ. 50ರಷ್ಟು ಏರಿಕೆ |School fee hike

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಹಾಲು, ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ವಿವಿಧ ಸರಕು ಮತ್ತು ಸೇವೆಗಳ ದರ ಏರಿಕೆ ಮಾಡಲಾಗಿದೆ. ಈ ನಡುವೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ.

ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಏಕಾಏಕಿ ಸಾವಿರಾರು ರೂಪಾಯಿ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಕೆಲವು ಖಾಸಗಿ ಶಾಲೆಗಳ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೊಸಹಳ್ಳಿ ಗ್ರಾಮದ ಎಂವಿಎಂ ಶಾಲೆಗೆ ಪೋಷಕರು ಮುತ್ತಿಗೆ ಹಾಕಿ ಆಡಳಿತ ಮಂಡಳಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ಶಾಲಾ ಶುಲ್ಕವನ್ನು ಹೆಚ್ಚಳ ಮಾಡಿರುವುದೇ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಹಳೆಯ ಮಕ್ಕಳ ಶಾಲಾ ಶುಲ್ಕದ ಮೇಲೆ ಶೇಕಡ 50ರಷ್ಟು ಶುಲ್ಕ ಹೆಚ್ಚಳ ಮಾಡಲಾಗಿದೆ. ಏಕಾಏಕಿ 20 ರಿಂದ 25 ಸಾವಿರ ರೂಪಾಯಿವರೆಗೆ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿದ ಪೋಷಕರು ಶಾಲೆಯ ಆಡಳಿತ ಮಂಡಳಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಕೆಜಿಗೆ ಈ ಹಿಂದೆ 75,000 ರೂ. ತೆಗೆದುಕೊಂಡಿದ್ದ ಶಾಲೆಯ ಆಡಳಿತ ಮಂಡಳಿ ಮುಂದಿನ ಬಾರಿ ಶುಲ್ಕ ಹೆಚ್ಚಳ ಮಾಡುವುದಿಲ್ಲವೆಂದು ಹೇಳಿತ್ತು. ಆದರೆ 20,000 ರೂ. ಶುಲ್ಕ ಹೆಚ್ಚಳ ಮಾಡಿದೆ. ವ್ಯಾನ್ ಶುಲ್ಕವನ್ನು ಕೂಡ ಹೆಚ್ಚಳ ಮಾಡಲಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ಹಲವು ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಮಾಡಿರುವುದು ಪೋಷಕರಿಗೆ ಹೊರೆಯಾಗಿ ಪರಿಣಮಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular