ಬೆಂಗಳೂರು : ವಿದ್ಯಾರ್ಥಿನಿಯೋರ್ವಳು ಗೃಹಲಕ್ಷ್ಮಿ ಹಣದಿಂದ ಓದಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದಿದ್ದಾಳೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಕೆ.ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ ಹೋಳಿ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ 570 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದು, ಇತಿಹಾಸ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾರೆ.
ತಂದೆ ಇಲ್ಲದ ಪೃಥ್ವಿಯ ತಾಯಿ ಶ್ಯಾಮಲಾ ಹೋಳಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಅವರಿಗೆ ಬರುವ ಗೃಹಲಕ್ಷ್ಮಿ ಹಣವು ಪೃಥ್ವಿಯ ವಿದ್ಯಾಭ್ಯಾಸಕ್ಕೆ ನೆರವಾಗಿದೆ. ಪ್ರತಿದಿನವೂ ಪರಿಪೂರ್ಣ ಶಿಕ್ಷಣಕ್ಕೆ ಹಂಬಲಿಸಿದ ಹೆಣ್ಣು ಮಗಳ ಕನಸು ಈ ಯೋಜನೆಯ ಮೂಲಕ ಸಾಕಾರಗೊಂಡಿದೆ.
ಬಡತನ ನಾಡಿನ ಮಕ್ಕಳ ಕಲಿಕಾ ಸಾಧನೆಗೆ ಅಡ್ಡಿಯಾಗಬಾರದು, ಅಂತಹ ವ್ಯವಸ್ಥೆಯೊಂದನ್ನು ನಿರ್ಮಾಣ ಮಾಡಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಾಗಿತ್ತು. ಗೃಹಲಕ್ಷ್ಮಿ ಯೋಜನೆಯು ಆ ಕನಸನ್ನು ಸಾಕಾರಗೊಳಿಸುತ್ತಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
https://www.facebook.com/photo/?fbid=1093407382826196&set=a.363544819145793