ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಶಾಸಕ ಬಸವರಾಜ ರಾಯರೆಡ್ಡಿ ಮತ್ತೊಮ್ಮೆ ಒಪ್ಪಿಕೊಂಡಿದ್ದಾರೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ರಾಜ್ಯ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರವನ್ನು, ಖುದ್ದು ಕಾಂಗ್ರೆಸ್ ಶಾಸಕ, ಮುಖ್ಯಮಂತ್ರಿಗಳ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಮತ್ತೊಮ್ಮೆ ಒಪ್ಪಿಕೊಂಡಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಯನ್ನು ಹೊರತುಪಡಿಸಿ ಇನ್ನೇನನ್ನೂ ಮಾಡಿಲ್ಲ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.

ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಸುಳ್ಳು ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ 60% ಕಮಿಷನ್ ಮೂಲಕ ಸರ್ಕಾರ ನಡೆಸುತ್ತಿದೆ. ಎಲ್ಲಾ ಇಲಾಖೆಗಳಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದೆ.ಕಲೆಕ್ಷನ್-ಕಮಿಷನ್ನಲ್ಲಿ ನಿರತವಾಗಿರುವ ಕೈ ಸರ್ಕಾರ ರಾಜ್ಯದ ಜನರ ಪಾಲಿಗೆ ಮರಣಶಾಸನವಾಗಿದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.

ಬಿಲದಿಂದ ಒಂದೊಂದೆ ಹೆಗ್ಗಣಗಳು ಹೊರ ಬಂದ ರೀತಿ ಭಂಡ ಹಾಗೂ ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರ ಹಗರಣಗಳು ಒಂದೊಂದಾಗಿ ಹೊರ ಬರುತ್ತಿವೆ!! ರಾಮಗಢ ಮಿನರಲ್ಸ್ ಸೇರಿ ಒಟ್ಟು 8 ಗಣಿಗಳಿಗೆ ಅನುಮತಿ ನೀಡಲು ”ಮಜಾವಾದಿ” ಸಿದ್ದರಾಮಯ್ಯ ಅವರು ಬರೋಬ್ಬರಿ ₹500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ದೂರು ದಾಖಲಾಗಿದೆ. ಸಿದ್ದರಾಮಯ್ಯ ಅವರ ಭ್ರಷ್ಟಾಚಾರದ ಪುಟಗಳು ದಿನಕ್ಕೊಂದರಂತೆ ಬಹಿರಂಗವಾಗುತ್ತಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read