ಬೆಂಗಳೂರು: ಕೋವಿಡ್ ಹಗರಣದ ತನಿಖಾ ಆಯೋಗದ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಜುಲೈ 31ರವರೆಗೆ ವಿಚಾರಣಾ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ. ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಲಾಗಿತ್ತು. ವಿಚಾರಣಾ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದವರ ಪ್ರಕರಣ ಸಂಬಂಧ ಪರಿಶೀಲನೆ ನಡೆಯಲಿದ್ದು, ಈ ನಿಟ್ಟಿನಲ್ಲಿ ತನಿಖಾ ಆಯೋಗದ ಅವಧಿ ವಿಸ್ತರಿಸಲಾಗಿದೆ.