ಬೆಂಗಳೂರು: ದ್ವಿತೀಯ ಪಿಯುಸಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸದೆ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗಿದೆ.
ಪಿಯು ಪರೀಕ್ಷೆ – 2 ಏಪ್ರಿಲ್ 24 ರಿಂದ ಮೇ 8ರ ವರೆಗೆ, ಪರೀಕ್ಷೆ – 3 ಜೂನ್ 9 ರಿಂದ 21ರ ವರೆಗೆ ನಡೆಯಲಿದೆ.
ವಿದ್ಯಾರ್ಥಿಗಳು ಶುಲ್ಕ ಪಾವತಿಸದೇ ಏಪ್ರಿಲ್ 9 ರಿಂದ ಏಪ್ರಿಲ್ 17ರ ಒಳಗಾಗಿ ಆಯಾ ಕಾಲೇಜುಗಳಲ್ಲಿ ಹೆಸರು ನೋಂದಾಯಿಸಿಕೊಂಡು ಪರೀಕ್ಷೆ ಬರೆಯಬಹುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.