HomeLatest Newsಸಾರ್ವಜನಿಕರೇ ಗಮನಿಸಿ: ಕುಡಿಯುವ ನೀರಿನ ಬಾಟಲಿ ಖರೀದಿಸುವಾಗ ಎಚ್ಚರಿಕೆ ವಹಿಸಿ

ಸಾರ್ವಜನಿಕರೇ ಗಮನಿಸಿ: ಕುಡಿಯುವ ನೀರಿನ ಬಾಟಲಿ ಖರೀದಿಸುವಾಗ ಎಚ್ಚರಿಕೆ ವಹಿಸಿ

ಬೆಂಗಳೂರು: ಸಾರ್ವಜನಿಕರು ಕುಡಿಯುವ ನೀರಿನ ಬಾಟಲಿಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ಹೊರಗಡೆ ದೊರೆಯುವ ನೀರಿನ ಬಾಟಲಿಗಳಲ್ಲಿ ಹಲವು ಅಸುರಕ್ಷಿತವಾಗಿರುವುದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ. ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ.

ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್‌ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular