ಹಾಸನ: ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹಾಸನದ ಬಿಎಂ ರಸ್ತೆಯಲ್ಲಿ ನಡೆದಿದೆ.
ಸರ್ಕಾರಿ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್‌ಸಿ ಓದುತ್ತಿದ್ದ ಶಶಾಂಕ್(21) ಮೃತಪಟ್ಟ ಯುವಕ. ಬೈಕ್ ನಲ್ಲಿ ವೇಗವಾಗಿ ಬರುತ್ತಿದ್ದ ವೇಳೆ ಬಿಎಂ ರಸ್ತೆಯಲ್ಲಿ ಪೊಲೀಸ್ ವಾಹನಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಶಶಾಂಕ್ ನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆಸ್ಪತ್ರೆ ಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಹಾಸನ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.