ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡರ ಸಂಬಂಧಿ ಹೇಮಂತ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿಯ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಂಬಿಬಿಎಸ್ ವಿದ್ಯಾರ್ಥಿ ಹೇಮಂತ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮುದ್ದೇನಹಳ್ಳಿಯ ಸತ್ಯಸಾಯಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಹೇಮಂತ್ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಯಿ ಜೊತೆಗೆ ಪ್ರವಾಸ ಮುಗಿಸಿ ಮನೆಗೆ ಬಂದಿದ್ದ ಮಗ ಸಂಜೆ ಸ್ನಾನ ಮುಗಿಸಿ ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾನೆ.ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದೆ. ಶವಾಗಾರದ ಬಳಿ ಕೆ.ಪಿ. ಬಚ್ಚೇಗೌಡ ಮತ್ತು ಸಂಬಂಧಿಕರು ದೌಡಾಯಿಸಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.