ಲಖನೌ: ರಾಜಭವನದ ಬಳಿ ಪ್ರತಿಭಟನೆ ನಡೆಸಿದ ಸಮಜವಾದಿ ಪಕ್ಷದ 31 ಸದಸ್ಯರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ.
ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಕುರುತು ದೆಹಲಿ ಸಿಎಂ ರೇಖಾ ಗುಪ್ತಾ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ ಸಮಾಜವಾದಿ ಪಕ್ಷದ ಮುಖಂಡರು ರಾಜಭವನದ ಮುಂದೆ ಪ್ರತಿಭಟನೆ ನಡೆಸಿದ್ದರು. ರೇಖಾ ಗುಪ್ತಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ಅನುಮತಿ ಪಡೆಯದೇ ರಾಜಭವನದ ಬಳಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಬಾಗೇಶ್ ಶರ್ಮಾ ನೀಡಿದ ದೂರಿನ ಹಿನ್ನೆಲೆಯಲ್ಲಿ ಹಜರತ್ ಗಂಜ್ ಪೊಲೀಸ್ ಠಾಣೆಯಲ್ಲಿ ಸಮಾಜವಾದಿ ಪಕ್ಷದ 31 ಸದಸ್ಯರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.