HomeKarnatakaBIG NEWS : ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮ : 36 ADLR ಗಳ...

BIG NEWS : ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮ : 36 ADLR ಗಳ ನೇಮಕ-CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು.

ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ ಎಂದು ಸಿಎಂ ಶೀಘಿಸಿದ್ದಾರೆ. ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಮತ್ತೂ ಕೊಡುತ್ತೇನೆ. ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ ಎಂದರು. ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಆಗಿರುವ ರೀತಿಯಲ್ಲೇ ಕೃಷ್ಣಬೈರೇಗೌಡರು ಸರ್ವೇಯರ್ ಗಳ ನೇಮಕಾತಿ ಮಾಡಿದ್ದಾರೆ. ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್ ಆರ್ ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು ಎಂದು ಘೋಷಿಸಿದರು.

ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular