HomeLatest NewsBREAKING: ಕೊಡಗು ಪೊಲೀಸರ ಭರ್ಜರಿ ಬೇಟೆ, 10 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ

BREAKING: ಕೊಡಗು ಪೊಲೀಸರ ಭರ್ಜರಿ ಬೇಟೆ, 10 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ

ಮಡಿಕೇರಿ: ಮಹತ್ವದ ಕಾರ್ಯಾಚರಣೆ ನಡೆಸಿರುವ ಕೊಡಗು ಜಿಲ್ಲಾ ಪೊಲೀಸರು ಕೇರಳ ರಾಜ್ಯದಿಂದ ಅಕ್ರಮವಾಗಿ ಕಾರ್ ನಲ್ಲಿ ಸಾಗಿಸುತ್ತಿದ್ದ 10 ಕೋಟಿ ರೂಪಾಯಿ ಮೌಲ್ಯದ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ತಿಮಿಂಗಿಲದ ವಾಂತಿ ಸಾಗಿಸುತ್ತಿದ್ದ 9 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 10 ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್, ಎರಡು ನೋಟು ಎಣಿಕೆ ಯಂತ್ರಗಳು ಮತ್ತು ಎರಡು ಕಾರ್ ವಶಕ್ಕೆ ಪಡೆಯಲಾಗಿದೆ.

ತಿರುವನಂತಪುರಂನಿಂದ ಅಕ್ರಮವಾಗಿ ತಿಮಿಂಗಿಲದ ವಾಂತಿ ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕೇರಳದ ಶಂಸುದ್ದೀನ್, ನವಾಜ್, ಲತೀಶ್, ರಿಜೇಶ್, ಪ್ರಶಾಂತ್ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ರಾಘವೇಂದ್ರ, ಕಾಸರಗೋಡಿನ ಬಾಲಚಂದ್ರ ನಾಯಕ್, ಕಲ್ಲಿಕೋಟೆಯ ಸಂಜು ಥಾಮಸ್, ಕಣ್ಣುರಿನ ಜೊಬಿನ್ ಅವರನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular