HomeLatest NewsBIG NEWS: ಹಿಂದುಳಿದ ವರ್ಗದವರಿಗೆ ಸಿಹಿ ಸುದ್ದಿ: ಇಂದು ಸಂಪುಟ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ...

BIG NEWS: ಹಿಂದುಳಿದ ವರ್ಗದವರಿಗೆ ಸಿಹಿ ಸುದ್ದಿ: ಇಂದು ಸಂಪುಟ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಜಾರಿಗೆ ಅಂಗೀಕಾರ ಸಾಧ್ಯತೆ

ಬೆಂಗಳೂರು: ಬಹುನಿರೀಕ್ಷಿತ ಜಾತಿ ಗಣತಿ ವರದಿಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡುವ ಸಾಧ್ಯತೆ ಇದೆ. ವರದಿ ಮಂಡನೆಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಹೀಗಾಗಿ ಸಂಪುಟ ಸಭೆಯಲ್ಲಿ ವರದಿ ಅಂಗೀಕರಿಸಲು ಸಿಎಂ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ(ಜಾತಿ ಗಣತಿ ವರದಿ -2015) ಚರ್ಚೆಯಲ್ಲಿದ್ದು, ಇಂದು ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು ವರದಿಗೆ ಬಹುತೇಕ ಅನುಮೋದನೆ ದೊರೆಯುವ ಸಾಧ್ಯತೆ ಇದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬರೋಬ್ಬರಿ 169 ಕೋಟಿ ರೂಪಾಯಿ ವೆಚ್ಚದಲ್ಲಿ ಈ ವರದಿಯನ್ನು ಸಿದ್ಧಪಡಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಸಿಎಂ ಇದನ್ನು ಮಂಡಿಸಲಿದ್ದಾರೆ. ವರದಿಯಲ್ಲಿನ ಅಂಶಗಳ ಬಗ್ಗೆ ಸಂಪುಟ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸುವ ಅಗತ್ಯವಿಲ್ಲ ಎಂದು ಸಂಪುಟ ಸಭೆ ನಿರ್ಧರಿಸಿದರೆ ಜಾತಿ ಗಣತಿ ವರದಿ ಜಾರಿ ಬಗ್ಗೆ ಇವತ್ತೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular