HomeLatest NewsBIG NEWS: ರಾಜ್ಯದಲ್ಲಿ 'ಪೋಡಿ ಮುಕ್ತ ಗ್ರಾಮ' ನಿರ್ಮಾಣ, ಎಲ್ಲಾ ಕೆರೆಗಳ ಒತ್ತುವರಿ ತೆರವು: ಸಿಎಂ...

BIG NEWS: ರಾಜ್ಯದಲ್ಲಿ ‘ಪೋಡಿ ಮುಕ್ತ ಗ್ರಾಮ’ ನಿರ್ಮಾಣ, ಎಲ್ಲಾ ಕೆರೆಗಳ ಒತ್ತುವರಿ ತೆರವು: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಪೋಡಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಸರ್ವೆ ಕಾರ್ಯ ಪೂರ್ಣಗೊಳಿಸಿ ಪೋಡಿ ಮುಕ್ತವಾಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಆಯೋಜಿಸಿದ್ದ 36ನೇ ರಾಷ್ಟ್ರೀಯ ಭೂಮಾಪನ ದಿನಾಚರಣೆಯಲ್ಲಿ ಅವರು ಮಾತನಾಡಿ, ಪೋಡಿ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಪೂರಕವಾಗಿ 227 ಪರವಾನಿಗೆ ಭೂಮಾಪಕರನ್ನು ಕಾಯಂ ಮಾಡಲಾಗುವುದು. ಸರ್ವೆ ಇಲಾಖೆಯಲ್ಲಿ ಖಾಲಿ ಇರುವ 36 ಸಹಾಯಕ ನಿರ್ದೇಶಕರನ್ನು ನೇಮಕ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಪೋಡಿ ಮುಕ್ತ ಅಭಿಯಾನ ನಡೆಸಿದರೂ ಇನ್ನು ಅನೇಕ ಗ್ರಾಮಗಳಲ್ಲಿ ಪೋಡಿ ಸಮಸ್ಯೆ ನಿವಾರಣೆಯಾಗಿಲ್ಲ. ಹೀಗಾಗಿ ಸರ್ವೆ ಕಾರ್ಯ ಪೂರ್ಣಗೊಳಿಸಿ ದಾಖಲೆಗಳನ್ನು ಸರಿಪಡಿಸಿ ಪೋಡಿ ಮುಕ್ತ ಗ್ರಾಮವನ್ನಾಗಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕೆರೆಗಳ ಒತ್ತುವರಿ ಪತ್ತೆ ಮಾಡಲು ರಾಜ್ಯ ಎಲ್ಲಾ ಕೆರೆಗಳ ಸರ್ವೆ ನಡೆಸಿ ಒತ್ತುವರಿ ತೆರವುಗೊಳಿಸಬೇಕು. ಇದಕ್ಕಾಗಿ ಸರ್ವೇ ಇಲಾಖೆ ಸೂಕ್ತ ರೀತಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular