HomeLatest Newsಇ- ಕಾಮರ್ಸ್ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಗುಡ್ ನ್ಯೂಸ್: 'ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ' ರಚನೆಗೆ ಇಂದು...

ಇ- ಕಾಮರ್ಸ್ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಗುಡ್ ನ್ಯೂಸ್: ‘ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ’ ರಚನೆಗೆ ಇಂದು ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು: ಫ್ಲಿಪ್ಕಾರ್ಟ್, ಅಮೆಜಾನ್ ಮತ್ತಿತರ ಇ-ಕಾಮರ್ಸ್ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಿ ಅನೇಕ ಕಲ್ಯಾಣ ಕಾರ್ಯಕ್ರಮ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ರಚಿಸಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.

ಜೀವನ ನಿರ್ವಹಣೆಗೆ ಯಾವುದೇ ಭದ್ರತೆ ಇಲ್ಲದೆ ದುಡಿಯುವ ಗಿಗ್ ಕಾರ್ಮಿಕರಿಗೆ ಅನುಕೂಲ ಮಾಡಿಕೊಡುವಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದು, ಅವರ ಸಲಹೆ ಮೇರೆಗೆ ಮಂಡಳಿ ರಚನೆ ಮಾಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯಮ ಸಚಿವರಾದ ಸಂತೋಷ್ ಲಾಡ್ಮ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ ಅವರು ಕಳೆದ ವಾರ ರಾಹುಲ್ ಗಾಂಧಿಯವರಿಗೆ ಈ ಕುರಿತಾದ ವಿವರ ನೀಡಿದ್ದಾರೆ. ಇದಕ್ಕಾಗಿ ಕರ್ನಾಟಕ ಫ್ಲಾಟ್ ಫಾರಂ ಆಧಾರಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ವಿಧೇಯಕ -2025 ಸಿದ್ಧವಾಗಿದ್ದು, ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ.

ಇ –ಕಾರ್ಮಸ್, ಪ್ಲಾಟ್ ಫಾರಂ ಆಧಾರಿತ ಕಂಪನಿಗಳಿಂದ ಶೇಕಡ 5ರಷ್ಟು ಸೆಸ್ ಸಂಗ್ರಹಿಸಿ ರಾಜ್ಯ ಸರ್ಕಾರದ ಪಾಲು ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲಾಗುವುದು. ಈ ನಿಧಿಯನ್ನು ಬಳಕೆ ಮಾಡಿ ಗಿಗ್ ಕಾರ್ಮಿಕರಿಗೆ ಭದ್ರತೆ ಕಲ್ಪಿಸುವ ಜೊತೆಗೆ 8 ಅಂಶಗಳನ್ನು ಆಧರಿಸಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular