HomeLatest NewsBREAKING: ಬಳ್ಳಾರಿಯಲ್ಲಿ ಘೋರ ದುರಂತ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

BREAKING: ಬಳ್ಳಾರಿಯಲ್ಲಿ ಘೋರ ದುರಂತ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಬಳ್ಳಾರಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ಸಿಡಿಗಿನಮೊL ಗ್ರಾಮದಲ್ಲಿ ನಡೆದಿದೆ.

ರಾಜೇಶ್(11), ಶಿವಶಂಕರ್(12) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಿನ್ನೆ ಕ್ರಿಕೆಟ್ ಆಟವಾಡಿ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರೂ ಬಾಲಕರು ಈಜು ಬಾರದೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಾಜೇಶ್, ಶಿವಶಂಕರ್ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಪರಮದೇವನಹಳ್ಳಿ(ಪಿ.ಡಿ. ಹಳ್ಳಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular