ಯಾದಗಿರಿ : ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಚಾಲಕ ಶರಣಪ್ಪ (30) ಸುನೀತಾ (19) ಸೋಮವ್ವ (50) ತಂಗಮ್ಮ (50) ಎಂದು ಗುರುತಿಸಲಾಗಿದೆ.
ಬೊಲೆರೊ ವಾಹನದಲ್ಲಿ ಕುಟುಂಬಸ್ಥರು ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
You Might Also Like
TAGGED:ಭೀಕರ ಅಪಘಾತ