ಬೆಂಗಳೂರು: ನಾವು ರಾಜಕೀಯದವರು ದಿನವೂ ಚದುರಂಗದ ದಾಳ ಉರುಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಚೆಸ್ ಪಂದ್ಯಾವಳಿಯ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜಕೀಯ ಚದುರಂಗ ಆಟ ಇದ್ದಂತೆ. ದಿನನಿತ್ಯದ ಜೀವನದಲ್ಲಿ ನಾವು ಚದುರಂಗದ ರೀತಿ ರಾಜಕೀಯ ದಾಳವನ್ನು ಉರುಳಿಸುತ್ತಿರುತ್ತೇವೆ. ರಾಜಕೀಯ ಚೆಸ್ ಆಟ ಇದ್ದಂತೆ ಎಂದು ನಾನು ಆಗಾಗ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ ಪ್ರತಿನಿತ್ಯವು ನಮ್ಮ ದಾಳ ಉರುಳಿಸುತ್ತಿರಬೇಕು. ನಮ್ಮ ರಾಜಕೀಯ ಎದುರಾಳಿಗಳ ವಿರುದ್ಧ ಆಕ್ರಮಣ ಮಾಡಬೇಕು ಎಂದು ಹೇಳಿದ್ದಾರೆ.
ಚದುರಂಗ ಆಡುವುದರಿಂದ ಏಕಾಗ್ರತೆ, ಶಿಸ್ತು ಕಲಿಯಬಹುದು. ಈ ನಿಟ್ಟಿನಲ್ಲಿ ಆಟದ ಬಗ್ಗೆ ಗಮನಹರಿಸಿ ಎಂದು ಹೇಳಿದ್ದಾರೆ.