BIG NEWS: ಗಿಗ್ ಕಾರ್ಮಿಕರ ವಿಧೇಯಕಕ್ಕೆ ಅನುಮೋದನೆ, ಸುಗ್ರೀವಾಜ್ಞೆ ಹೊರಡಿಸಲು ನಿರ್ಧಾರ: ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಬೆಂಗಳೂರು: ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ(ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ) ವಿಧೇಯಕ – 2024ಅನ್ನು ಅನುಮೋದಿಸಿ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಂತಿವೆ.

ಈ ಹಿಂದಿನ ಸರ್ಕಾರದ ಅವಧಿಯಲ್ಲಿ ರಾಜ್ಯ ಗುತ್ತಿಗೆದಾರರ ಸಂಘದವರು ಮಾಡಿದ್ದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಎಚ್‌. ಎನ್‌. ನಾಗಮೋಹನ್‌ದಾಸ್ ಅವರ ಆಯೋಗವು ಸಲ್ಲಿಸಿರುವ ವರದಿಯ ಆಧಾರದ ಮೇಲೆ ಎಸ್‌ಐಟಿ ರಚನೆಗೆ ನಿರ್ಧಾರ.

38 ತಾಲ್ಲೂಕು ಆಸ್ಪತ್ರೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಶಂಕಿತ ಕ್ಷಯರೋಗಿಗಳು ಭೇಟಿ ನೀಡುವ 121 ಸಮುದಾಯ ಆರೋಗ್ಯ ಕೇಂದ್ರಗಳಿಗೆ ರೂ. 14.24 ಕೋಟಿಗಳ ವೆಚ್ಚದಲ್ಲಿ 159 True NAAT ಯಂತ್ರಗಳ ಖರೀದಿಗೆ ನಿರ್ಧಾರ.

ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಪರಿಸರ ಸ್ನೇಹಿಯಾಗಿಸಲು ವಿಶ್ವಬ್ಯಾಂಕ್ ನಿಂದ ರೂ.3,000 ಕೋಟಿಗಳ ಸಾಲ ಪಡೆದು ವಿವಿಧ ಸಾರಿಗೆ ನಿಗಮಗಳಿಗೆ ಒಟ್ಟು 4,000 ಬಸ್‌ಗಳನ್ನು ಖರೀದಿಸಲು ಕರ್ನಾಟಕ ಎಲೆಕ್ಷ್ಮೀಕ್ ಬಸ್ ಪ್ರೋಗ್ರಾಂ ಅಡಿಯಲ್ಲಿ ಸಲ್ಲಿಸಿರುವ ಪ್ರಸ್ತಾವನೆಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ.

ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಪರಿಸರ ಸ್ನೇಹಿಯಾಗಿಸಲು ವಿಶ್ವಬ್ಯಾಂಕ್ ನಿಂದ 3,000 ಕೋಟಿ ರೂ. ಸಾಲ ಪಡೆದು ವಿವಿಧ ಸಾರಿಗೆ ನಿಗಮಗಳಿಗೆ ಒಟ್ಟು 4,000 ಬಸ್‌ಗಳನ್ನು ಖರೀದಿಸಲು ಕರ್ನಾಟಕ ಎಲೆಕ್ಷ್ಮೀಕ್ ಬಸ್ ಪ್ರೋಗ್ರಾಂ ಅಡಿಯಲ್ಲಿ ಸಲ್ಲಿಸಿರುವ ಪ್ರಸ್ತಾವನೆಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ.

ಈ ಹಿಂದಿನ ಸರ್ಕಾರದ ಅವಧಿಯಲ್ಲಿ ರಾಜ್ಯ ಗುತ್ತಿಗೆದಾರರ ಸಂಘದವರು ಮಾಡಿದ್ದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಎಚ್‌. ಎನ್‌. ನಾಗಮೋಹನ್‌ದಾಸ್ ಅವರ ಆಯೋಗವು ಸಲ್ಲಿಸಿರುವ ವರದಿಯ ಆಧಾರದ ಮೇಲೆ ಎಸ್‌ಐಟಿ ರಚನೆಗೆ ನಿರ್ಧಾರ.

38 ತಾಲ್ಲೂಕು ಆಸ್ಪತ್ರೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಶಂಕಿತ ಕ್ಷಯರೋಗಿಗಳು ಭೇಟಿ ನೀಡುವ 121 ಸಮುದಾಯ ಆರೋಗ್ಯ ಕೇಂದ್ರಗಳಿಗೆ ರೂ. 14.24 ಕೋಟಿಗಳ ವೆಚ್ಚದಲ್ಲಿ 159 True NAAT ಯಂತ್ರಗಳ ಖರೀದಿಗೆ ನಿರ್ಧಾರ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿಯನ್ನು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದು, ಈ ವರದಿ ಕುರಿತು ಚರ್ಚಿಸಲು ದಿನಾಂಕ 17.4.2025 ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read