ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ರಾಜ್ಯ ಸರ್ಕಾರ ತಡೆ ಹಿಡಿದು ಆದೇಶಿಸಿದೆ.
ಒಳ ಮೀಸಲಾತಿ ಜಾರಿಯಾಗುವವರೆಗೆ ನೇಮಕಾತಿಗಳನ್ನು ಮಾಡಬಾರದು ಎನ್ನುವ ಒತ್ತಾಯದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯಲಾಗಿದೆ. ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದು ಎಂದು ತಿಳಿಸಲಾಗಿದೆ.
2024ರ ಅಕ್ಟೋಬರ್ 28ರ ನಂತರ ನೇರ ನೇಮಕಾತಿಗಾಗಿ ಅಥವಾ ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆ ಹೊರಡಿಸಿದ್ದರೆ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.