BIG NEWS : ರಾಜ್ಯದಲ್ಲಿ ‘ಹೊಸ ನೇಮಕಾತಿ ಹಾಗೂ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ’ಗೆ ತಡೆ : ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿದ್ದು, ಇದರನ್ವಯ ದಿನಾಂಕ 28-10-2024ರ ನಂತರ ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಆದೇಶಿಸಲಾಗಿದೆ.

ಏನಿದೆ ಆದೇಶದಲ್ಲಿ..?
ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವ ಬಗ್ಗೆ ಉಲ್ಲೇಖಿತ ದಿನಾಂಕ:25:11.2024ರ ಸುತ್ತೋಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿರುತ್ತದೆ. ಮುಂದುವರೆದು ದಿನಾಂಕ 29.03.2025ರ ಸುತ್ತೋಲೆಯಲ್ಲಿ ದಿನಾಂಕ:25.11.2024ರ ನಂತರ ಹೊರಡಿಸಿರುವ ಅಧಿಸೂಚನೆಗಳನ್ನು ಕೂಡಲೇ ಹಿಂಪಡೆಯುವಂತೆ ಸೂಚಿಸಲಾಗಿರುತ್ತದೆ.

ದಿನಾಂಕ:25.11.2024ರಲ್ಲಿನ ಸೂಚನೆಗಳು 2:28.10.2024 ರಿಂದಲೇ ಅನ್ವಯವಾಗುವುದರಿಂದ, ದಿನಾಂಕ:28.10.2024 ರ ನಂತರ ನೇರ ನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read