HomeKarnatakaBIG NEWS : 'ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಲೋಕಾಯುಕ್ತಕ್ಕೆ 'ಆಸ್ತಿ ವಿವರ' ಸಲ್ಲಿಕೆ...

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಲೋಕಾಯುಕ್ತಕ್ಕೆ ‘ಆಸ್ತಿ ವಿವರ’ ಸಲ್ಲಿಕೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ |GOVT EMPLOYEE

ಬೆಂಗಳೂರು : ಸರ್ಕಾರಿ ನೌಕರರ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಕರ್ನಾಟಕ ಲೋಕಾಯುಕ್ತದ ಅಧಿಕಾರಿಗಳು ಕೋರಿದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಲೋಕಾಯುಕ್ತ ಕಾಯ್ದೆ 1984 ಹಾಗೂ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 ರಡಿ ಪ್ರಾಧಿಕರಿಸಲ್ಪಟ್ಟ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ಸರ್ಕಾರಿ ನೌಕರರ ಹಾಗೂ ಅವರ ಕುಟುಂಬದ ಸದಸ್ಯರ ಚರಾಸ್ತಿ/ಸ್ಮಿರಾಸ್ತಿಗಳ ಮಾಹಿತಿ ಹಾಗೂ ವಿವರಗಳನ್ನು ಕೋರಿದ ಸಂದರ್ಭದಲ್ಲಿ ಅವುಗಳನ್ನು ಕೆಲವು ಇಲಾಖಾ ಅಧಿಕಾರಿಗಳು ಮತ್ತು ಸಕ್ಷಮ ಪ್ರಾಧಿಕಾರಿಗಳು ಒದಗಿಸದಿರುವ ಬಗ್ಗೆ ಉಲ್ಲೇಖ (1) ರ ಅರ ಸರ್ಕಾರದ ಪತ್ರದಲ್ಲಿ ನಿಬಂಧಕರು ಕರ್ನಾಟಕ ಲೋಕಾಯುಕ್ತ ಇವರು ಸರ್ಕಾರದ ಗಮನ ಸೆಳೆದಿದ್ದು, ಇಂತಹ ಮಾಹಿತಿಯನ್ನು (ಅವುಗಳ ಅರಸಿಕೆಗೆ (access) ಕೆಲವು ಸುರಕ್ಷತೆ ಮತ್ತು ಇತಿಮಿತಿಗಳನ್ನು ನಿಗದಿಪಡಿಸುವುದಕ್ಕೆ ಒಳಪಟ್ಟು) ಜಾಲತಾಣದಲ್ಲಿ ರ್ಪಕಟಿಸಿದಲ್ಲಿ (web host) ಅದು ಲೋಕಾಯುಕ್ತ ಸಂಸ್ಥೆಗೂ ಲಭ್ಯವಾಗುತ್ತದೆಯೆಂದು ಅಭಿಪ್ರಾಯ ಪಡುತ್ತಾ, ಇಂತಹ ಮಾಹಿತಿಯನ್ನು ಜಾಲತಾಣದಲ್ಲಿ ಪ್ರಕಟಪಡಿಸುವ ಸಂಬಂಧ ಎಲ್ಲಾ ಇಲಾಖಾ ಮುಖ್ಯಸ್ಮರಿಗೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿರುತ್ತಾರೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ 24ರಂತೆ ಪ್ರತಿಯೊಬ್ಬ ಸರ್ಕಾರಿ ನೌಕರನು ಸರ್ಕಾರಿ ಸೇವೆಗೆ ಸೇರುವಾಗ ಹಾಗೂ ತರುವಾಯ ಪ್ರತಿ ವರ್ಷ ಆತನ ಹಾಗೂ ಆತನ ಕುಟುಂಬದ ಸದಸ್ಯರ ಆಸ್ತಿ ಹೊಣೆಗಾರಿಕೆ ಪಟ್ಟಿಯನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ.ಲೋಕಾಯುಕ್ತ ಸಂಸ್ಥೆ ಅಸ್ತಿತ್ವಕ್ಕೆ ಬರುವ ಪೂರ್ವದಲ್ಲಿ ರಾಜ್ಯದಲ್ಲಿದ್ದ Vigilance Commission ಕೈಗೊಳ್ಳುವ ಇಲಾಖಾ ವಿಚಾರಣೆಗಳಲ್ಲಿ ತನಿಖಾ ಸಂಸ್ಥೆಯು ಕೋರುವ ಮಾಹಿತಿ/ದಾಖಲೆಗಳನ್ನು ವಿಳಂಬವಿಲ್ಲದ ಅವರಿಗೆ ಒದಗಿಸುವಂತೆ ಉಲ್ಲೇಖ(2) ಮತ್ತು (3)ರ ಸುತ್ತೋಲೆಗಳಲ್ಲಿ ಕೆಲವು ಸೂಚನೆಗಳನ್ನು ನೀಡಲಾಗಿದೆ. ಈ ಸೂಚನೆಗಳು ಲೋಕಾಯುಕ್ತದ ಪ್ರಕರಣಗಳಿಗೂ ಅನ್ವಯವಾಗುತ್ತವೆ ಎಂಬ ಅಂಶವನ್ನು ಪುನರುಚ್ಛರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ-ಹೊಣೆಗಾರಿಕೆಗೆ ಸಂಬಂಧಿಸಿದ ಮಾಹಿತಿ ವಿವರಗಳನ್ನು ಲೋಕಾಯುಕ್ತದ ಸಕ್ಷಮ ಅಧಿಕಾರಿಗಳು ಕೋರಿದ ಸಂದರ್ಭದಲ್ಲಿ ಅವುಗಳನ್ನು ಯಾವುದೇ ವಿಳಂಬವಿಲ್ಲದೇ ಅವರಿಗೆ ಒದಗಿಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಹಾಗೂ ಸಕ್ಷಮ ಪ್ರಾಧಿಕಾರಗಳಿಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಈ ಸೂಚನೆಗಳನ್ನು ಪಾಲಿಸಲು ವಿಫಲರಾದ ಇಲಾಖಾ ಮುಖ್ಯಸ್ಥರು ಹಾಗೂ ಸಕ್ಷಮ ಪ್ರಾಧಿಕಾರಗಳನ್ನು ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular