ಧಾರವಾಡ : ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನವಲಗುಂದ ತಾಲೂಕಿನ ಯಮನೂರಿನಲ್ಲಿ ನಿನ್ನೆ ಸಂಜೆ ನಡೆದಿದೆ.
ವಿಷ ಸೇವಿಸಿದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತಾಯಿ ಮಾಲಾಂಬಿ (29) ಅಪಾಯದಿಂದ ಪಾರಾಗಿದ್ದಾರೆ. ಫಯಾಜ್ (8) ಆರೀಫ್ (9) ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಮೂವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ತನ್ನ ಇಬ್ಬರು ಮಕ್ಕಳಿಗೆ ಅನ್ನದಲ್ಲಿ ವಿಷ ಹಾಕಿ ಕೊಟ್ಟಿದ್ದಾಳೆ. ಬಳಿಕ ತಾನೂ ಕೂಡ ವಿಷ ಮಿಶ್ರಿತ ಅನ್ನವನ್ನು ಸೇವಿಸಿದ್ದಾಳೆ. ಏನೂ ಅರಿಯದ ಇಬ್ಬರು ಮಕ್ಕಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
You Might Also Like
TAGGED:ಧಾರವಾಡ