HomeLive Newsಸರ್ಕಾರದ ವಿರುದ್ಧ ಪೋಸ್ಟರ್ ಅಭಿಯಾನ ಮಾಡಿದವರ ವಿರದ್ಧ ಪ್ರಕರಣ ದಾಖಲು

ಸರ್ಕಾರದ ವಿರುದ್ಧ ಪೋಸ್ಟರ್ ಅಭಿಯಾನ ಮಾಡಿದವರ ವಿರದ್ಧ ಪ್ರಕರಣ ದಾಖಲು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಗಳನ್ನು ಅಂಟಿಸಿ ಅಭಿಯಾನ ನಡೆಸಿದ್ದವರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ಪೋಸ್ಟರ್ ಗಳನ್ನು ಬೆಂಗಳೂರಿನ ವಿವಿಧೆಡೆ ಅಂಟಿಸುವ ಮೂಲಕ ಪೋಸ್ಟರ್ ಅಭಿಯಾನ ನಡೆಸಿತ್ತು. ಬೆಂಗಳೂರಿನ ಮಹಾರಾಣಿ ಕಾಲೇಜು ಬಸ್ ನಿಲ್ದಾಣ, ಕೆ.ಆರ್.ಸರ್ಕಲ್ ಸೇರಿದಂತೆ ವಿವಿಧೆಡೆ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಿ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಕಿಡಿಕಾರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನುಮತಿಯಿಲ್ಲದೇ ಪೋಸ್ಟರ್ ಗಳನ್ನು ಅಂಟಿಸಿದ್ದಕ್ಕಾಗಿ ಹಲಸೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular