BIG NEWS : ಏ.16 ರಿಂದ ‘CET’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಏಪ್ರಿಲ್ 16, 17ರಂದು ಸಿಇಟಿ ಪರೀಕ್ಷೆ ನಡೆಸಲಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಈ ನಿಯಮಗಳ ಪಾಲನೆ ಮಾಡುವುದು ಕಡ್ಡಾಯವಾಗಿದೆ.

ಇದೇ ಮೊದಲ ಬಾರಿಗೆ ಒಟಿಪಿ ಮತ್ತು ಮುಖ ಚಹರೆ ಆಧಾರಿತ ಲಾಗಿನ್ ವ್ಯವಸ್ಥೆ ಮಾಡಲಾಗಿದೆ. ಪ್ರವೇಶ ಪತ್ರದಲ್ಲಿ ಪ್ರಮುಖವಾಗಿ ಕ್ಯೂಆರ್ ಕೋಡ್ ಇದೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಮಾದರಿ ಒಎಂಆರ್ ಶೀಟ್ ಮತ್ತು ಮಾರ್ಗಸೂಚಿ ಪಟ್ಟಿ ನೀಡಲಾಗಿದೆ.

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪರೀಕ್ಷೆಗೆ 3.30 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 15ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಇದೇ ಪ್ರವೇಶ ಪತ್ರ ಅನ್ವಯವಾಗುತ್ತದೆ.

ಏಪ್ರಿಲ್ 16ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಹಾಗೂ ಏಪ್ರಿಲ್ 17ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 11.50 ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮೊದಲು ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇರುತ್ತದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡೊಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡೊಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ ಬೇಕಾಗಿರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವುದು ಮತ್ತು ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿಗಳಿಂದ ಘೋಷಿಸುವುದು. ವಿಜ್ಞಾನ ವಿಷಯವನ್ನು ಬೋಧಿಸುವ ಉಪನ್ಯಾಸಕರು, ಶಿಕ್ಷಕರು ಹಾಗೂ ಸಂಬಂಧಿಕರ, ಸ್ವಂತ ಮಕ್ಕಳು ಈ ಪರೀಕ್ಷೆಗೆ ಹಾಜರಾಗುತ್ತಿದ್ದರೆ ಅಂತಹ ಉಪನ್ಯಾಸಕರು, ಶಿಕ್ಷಕರನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸುವಂತೆ ಇಲ್ಲ.
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನುಗಳನ್ನು ತರುವುದು ಹಾಗೂ ಕೈ ಗಡಿಯಾರವನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಉಪನ್ಯಾಸಕರು, ಕಚೇರಿ ಸಿಬ್ಬಂದಿಯವರು ಪರೀಕ್ಷೆ ನಡೆಯುವ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ತರುವುದುನ್ನು ಹಾಗೂ ಕೈ ಗಡಿಯಾರ ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಮುಖ್ಯ ಅಧೀಕ್ಷಕರು ಬೇಸಿಕ್ ಸೆಟ್ ಉಪಯೋಗಿಸಲು ಅವಕಾಶ ನೀಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವಾ ಸಿಸಿಟಿವಿ ವೀಕ್ಷಣೆಯಡಿಯಲ್ಲಿ ಕಾರ್ಯನಿರ್ವಹಿಸುವುದು ಮತ್ತು ಎಲ್ಲ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read