HomeLatest Newsಕರ್ನಾಟಕದಲ್ಲಿ 5 ದಿನಗಳ ಕಾಲ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ...

ಕರ್ನಾಟಕದಲ್ಲಿ 5 ದಿನಗಳ ಕಾಲ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ರಣ ಬಿಸಿಲು ಆರಂಭವಾಗಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಹಲವೆಡೆ ಐದು ದಿನಗಳ ಕಾಲ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಏಪ್ರಿಲ್ 16ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಹಾಗೂ ನಾಳೆ ಹಗುರ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಧಾರವಾಡ, ಗದಗ, ಬೆಳಗಾವಿ, ಚಿತ್ರದುರ್ಗ, ಕೋಲಾರ, ತುಮಕೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular