BIG NEWS : ಐತಿಹಾಸಿಕ ‘ಗಿಗ್ ಕಾರ್ಮಿಕರ ಮಸೂದೆ’ಗೆ ರಾಜ್ಯ ಸರ್ಕಾರ ಅನುಮೋದನೆ.! ಯಾರಿಗೆಲ್ಲಾ ಪ್ರಯೋಜನ.?

ಬೆಂಗಳೂರು : ದೇಶದಲ್ಲೇ ಮೊದಲ ಐತಿಹಾಸಿಕ ಮಸೂದೆಗೆ ಕರ್ನಾಟಕ ಸಾಕ್ಷಿಯಾಗಿದೆ. ಕರ್ನಾಟಕ ಪ್ಲಾಟ್ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಮಸೂದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವುದಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದ್ದಾರೆ.

ಪ್ಲಾಟ್ಫಾರ್ಮ್ ಆಧಾರಿತ ಸೇವೆಗಳಾದ ಸ್ವಿಗ್ಗಿ, ಜೊಮಾಟೊಗಳಲ್ಲಿ ಫುಡ್ ಡೆಲವರಿ ಮಾಡುವ, ರೈಡ್ ಶೇರಿಂಗ್ ಸೇವೆಗಳಾದ ಓಲಾ, ಉಬರ್ ಮತ್ತು ನಮ್ಮ ಯಾತ್ರಿ ಇತ್ಯಾದಿ ಅಪ್ಲಿಕೇಷನ್ ಆಧಾರಿತ ಚಾಲಕರು, ಇ–ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಮತ್ತಿತ್ತರ ಕ್ಷೇತ್ರಗಳಲ್ಲಿ ಪೂರ್ಣಕಾಲಿಕ ಅಥವಾ ಅರೆಕಾಲಿಕ ಡೆಲವರಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು, ಕಾರ್ಮಿಕ ಕಾನೂನುಗಳಡಿ ಲಭ್ಯವಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಪಡೆಯಲಿದ್ದಾರೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read