HomeLatest NewsGOOD NEWS : ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ : ಮನೆ, ವಾಹನ ಖರೀದಿ,...

GOOD NEWS : ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ : ಮನೆ, ವಾಹನ ಖರೀದಿ, ಚಿಕಿತ್ಸೆಗೆ ನೆರವು ಸೇರಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಸಾಲಿನ ಆಯವ್ಯಯದಡಿ ಅನುಷ್ಠಾನಗೊಳ್ಳುವ ಕಲ್ಯಾಣ ಕಾರ್ಯಕ್ರಮಗಳಿಗೆ ಪಾಲಿಕೆ ವ್ಯಾಪ್ತಿಯ ಪೌರ ಕಾರ್ಮಿಕರು, ಪರಿಶಿಷ್ಟ ಜಾತಿ / ಪಂಗಡಗಳು, ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಕಲ್ಯಾಣ ಕಾರ್ಯಕ್ರಮಗಳು

 ಒಂಟಿ ಮನೆ ನಿರ್ಮಾಣ ಮತ್ತು ಅಮೃತ ಮಹೋತ್ಸವ ಯೋಜನೆಯಡಿ ಫ್ಲಾಟ್ ಖರೀದಿಗೆ ಧನ ಸಹಾಯ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

 ಪೌರ ಕಾರ್ಮಿಕರು ಹಾಗೂ ಉದ್ಯೋಗಸ್ಥ ಮಹಿಳೆಯರಿಗೆ ಎಲೆಕ್ನಿಕ್ ದ್ವಿಚಕ್ರ ವಾಹನ ವಿತರಣೆ (ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಪ್ರಥಮ ಆದ್ಯತೆ)

ವಿಶೇಷ ಚೇತನರಿಗೆ ಹೆಚ್ಚುವರಿ ಚಕ್ರ ಅಳವಡಿಸಿದ ಎಲೆಕ್ನಿಕ್ ತ್ರಿಚಕ್ರ ವಾಹನ ಮತ್ತು ವೀಲ್‌ಚೇ‌ರ್ ವಿತರಣೆ

ಗಂಭೀರ ಕಾಯಿಲೆ, ಹಿರಿಯ ನಾಗರಿಕರ ಆರೋಗ್ಯ ತಪಾಸಣೆ, ಅಂಗ ವೈಫಲ್ಯ ಶಸ್ತ್ರ ಚಿಕಿತ್ಸೆಗೆ ಧನಸಹಾಯ

ಬೀದಿಬದಿ ವ್ಯಾಪಾರಸ್ಥರಿಗೆ ಎಲೆಕ್ನಿಕ್ ವೆಂಡಿಂಗ್ ಮೆಷಿನ್ ವಿತರಣೆ

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗಗಳ ಪೌರಕಾರ್ಮಿಕ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ

ಸಂಗೀತ ಸಾಧನ ಖರೀದಿ, ಕ್ರೀಡಾಪಟುಗಳಿಗೆ ಸಹಾಯಧನ, ಸ್ವಯಂ ಉದ್ಯೋಗ, ವಿಶೇಷ ಚೇತನರಿಗೆ ಔಷಧಿ ಅಂಗಡಿ ಪ್ರಾರಂಭ, ಆಟೋ / ಕಾರು ಖರೀದಿಗೆ ಸಹಾಯ

 ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ

ಸಾಂಸ್ಕೃತಿಕ ಹಾಗೂ ವಿಶೇಷಚೇತನ ವಿದ್ಯಾ ಸಂಸ್ಥೆಗಳಗೆ ಆರ್ಥಿಕ ನೆರವು

 ಶಾಲಾ ಶುಲ್ಕ ಮರುಪಾವತಿ, ಉನ್ನತ / ವಿದೇಶ ವ್ಯಾಸಂಗಕ್ಕೆ ಸಹಾಯಧನ

ಅರ್ಜಿಗಳನ್ನು ಸಂಬಂಧಿತ ವಲಯ ಸಹಾಯಕ ಕಂದಾಯ ಅಧಿಕಾರಿ(ಕಲ್ಯಾಣ) ಕಛೇರಿಯಲ್ಲಿ ಸಲ್ಲಿಸಬಹುದು. ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸುವುದು. ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಲು ಈ ದಿನಾಂಕವನ್ನು ವಿಸ್ತರಿಸಲಾಗಿದೆ.

ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಸಾರ್ವಜನಿಕರು ಕಲ್ಯಾಣ ಕಾರ್ಯಕ್ರಮದ ಫಲಾನುಭವಿಗಳಾಗಬೇಕೆಂಬ ಉದ್ದೇಶದಿಂದ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ರವರ

ನಿರ್ದೇಶನದಂತೆ ಅರ್ಜಿ ಸಲ್ಲಿಸಲು ಕೊನೆಯ ದಿನ 02-05-2025ರವರೆಗೆ  ವಿಸ್ತರಿಸಲಾಗಿದೆ. ಅರ್ಹ ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular