ಶಿಮ್ಲಾ: ಹಿಮಾಚಲ ಪ್ರದೇಶದ ಮಡಿ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಮಂಡಿ ಪ್ರದೇಶದಲ್ಲಿ ಲಘು ಭೂಕಂಪ ಸಂಭವಿಸಿದ್ದು, 3.4ರಷ್ಟು ತೀವ್ರತೆ ದಾಖಲಾಗಿದೆ. ಇಂದು ಬೆಳಿಗ್ಗೆ 9.18ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಮಂಡಿ ಪ್ರದ್ರೇಶದಲ್ಲಿ 31.49 ಡಿಗ್ರಿ ಅಕ್ಷಾಂಶ ಮತ್ತು 76.94 ಡಿಗ್ರಿ ರೇಖಾಂಶದಲ್ಲಿ 5 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.