ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಹೃದಯಗಹಾತದಿಂದ ಸಾವನ್ನಪ್ಪುತ್ತಿರುವರರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೆಡ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ನಡೆದಿದೆ.
ಮಲ್ಲಸರ್ಜ ಅಂಕಲಗಿ (45) ಮೃತ ಹೆಡ್ ಕಾನ್ಸ್ ಟೇಬಲ್. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಡ್ಯೂಟಿ ಮುಗಿಸಿ ಮನೆಗೆ ಬಂದ ಮಲ್ಲಸರ್ಜ ಅಂಕಲಗಿ, ಊಟ ಮಾಡಿ ರಾತ್ರಿ ಮಲಗಿದ್ದರು. ಇಂದು ಬೆಳಿಗ್ಗೆ ಎಷ್ಟು ಹೊತ್ತಾದರೂ ಎದ್ದಿಲ್ಲ. ಮನೆಯವರು ಕರೆದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಎಬ್ಬಿಸಲು ಹೋದಾಗ ಅವರು ಕೊನೆಯುಸಿರೆಳೆದಿರುವುದು ಗೊತ್ತಾಗಿದೆ.
ಹೆಡ್ ಕಾನ್ಸ್ ಟೇಬಲ್ ನಿಧನ ಕುಟುಂಬದವರನ್ನು ಆಘಾತಕ್ಕೀಡು ಮಾಡಿದೆ. ಪೊಲೀಸ್ ಸಿಬ್ಬಂದಿಯ ಅಕಾಲಿಕ ನಿಧನಕ್ಕೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸೇರಿದಂತೆ ಹಲವು ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.