ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಎಂಟು ಜನರು ಸಾವನ್ನಪ್ಪಿರುವ ಘಟನೆ ಆಂಢ್ರಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ.
ಇಬ್ಬರು ಮಹಿಳೆಯರು ಸೇರಿ ಎಂಟು ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅನಕಪಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ.
ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಅನಕಪಲ್ಲಿಯ ಕೋಟಾವರ್ತುಲ ತಾಲೂಕಿನ ಕೈಲಾಸಪಟ್ಟಣಂ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.