ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 4ನೇ ಮಹಡಿಯಿಂದ ಜಿಗಿದು ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
19 ವರ್ಷದ ಸೌಮ್ಯಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ದಂತ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ಸೌಮ್ಯಾ ಅಪಾರ್ಟ್ಮೆಂಟ್ ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂತ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿಯಾಗಿರುವ ಸೌಮ್ಯಾ ಪರೀಕ್ಷೆ ವಿಚಾರವಾಗಿ ಭಯಗೊಂಡಿದ್ದರು. ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಲಾಗಿದೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.