ಬೆಂಗಳೂರು: ದಂತ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರುನ ಹೆಬ್ಬಾಅಳ ಬಳಿ ನಡೆದಿದೆ.
21ವರ್ಷದ ಸೌಮ್ಯ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ದಂತ ವೈದ್ಯಕೀಯ ಎರಡನೇ ವರ್ಷದ ಕೋರ್ಸ್ ಮಾಡುತ್ತಿದ್ದಳು. ತಂದೆ ಗಣೇಶ್ ನಾರಾಯಣ್ ವೃತ್ತಿಯಲ್ಲಿ ಎಂಜಿನಿಯರ್. ಮೂಲತ: ಆಂಧ್ರಪ್ರದೇಶದವರು ಎಂದು ತಿಳಿದುಬಂದಿದೆ.
ತಂದೆ, ತಾಯಿ, ಸಹೋದರನ ಜೊತೆ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಸೌಮ್ಯ, ಪರೀಕ್ಷಾ ಭಯದಿಂದ ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ